ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಬಿಜೈ ಕಾಪಿಕಾಡ್ ಅಂಗನವಾಡಿ ಶಾಲೆಗೆ ಎರಡು ಸಿಲಿಂಗ್ ಫ್ಯಾನ್ ಗಳನ್ನು ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಫದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಉಪಸ್ಥಿತರಿದ್ದರು.