ಬೆಂಗಳೂರು: ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಜಾಹೀರಾತು ನೀಡಿದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು, ಈ ಮೂಲಕ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದ್ದು, ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.