ಬೆಂಗಳೂರು : ಬೆಂಗಳೂರಿನ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ ಮಾರ್ಕೆಟ್ಗಳಿಗೆ ಸಾಗಿಸುವ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದ್ದತ್ತು.