ಶಿವಮೊಗ್ಗ : ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಸಿಡಿದೆದ್ದಿರುವ ಕೆಎಸ್ ಈಶ್ವರಪ್ಪ ಬಂಡಾಯ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಸಮಾಧಾನಗೊಂಡಿರುವ ಈಶ್ವರಪ್ಪ ಅವರನ್ನು ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಸಹ ಈಶ್ವರಪ್ಪ ಯಾವುದೇ ಮಾತಿಗೂ ಜಗ್ಗದೇ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.