ನನಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಹೈಕಮಾಂಡ್ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಅವರು ನಾನು ಹೇಳುವವರೆಗೆ ಏನೂ ಮಾಡಬೇಡಿ ಎಂದಿದ್ದಾರೆ. ಹೀಗಾಗಿ ನಾನು ಎಲ್ಲೂ ಮಾತನಾಡಿಲ್ಲ. ಯಡಿಯೂರಪ್ಪ ಅವರು ಏನೋ ಹೇಳಿದ್ದಾರೆ. ಹೀಗಾಗಿ ಅಲ್ಲಿಯವರೆಗೆ ಮಾತನಾಡಲ್ಲ ಮತ್ತು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು.