ರಾಯಚೂರು: ಆರ್ಟಿಪಿಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಎಂಟು ಘಟಕಗಳಲ್ಲಿ ನಾಲ್ಕು ಘಟಕಗಳು ಬಂದ್ ಆಗಿವೆ. ಎರಡು ಘಟಕಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಒಟ್ಟು 1720 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿರೊ ಆರ್ಟಿಪಿಎಸ್ನಲ್ಲಿ ನಾಲ್ಕು ಘಟಕ ಬಂದ್ ಆಗಿದ್ದರಿಂದ 903 ಮೆ.ವ್ಯಾ.ವಿದ್ಯುತ್ ಉತ್ಪಾದನೆ ಮಾಡಲಾಗಿದೆ.
ರಾಯಚೂರು ತಾಲೂಕಿನ ಶಕ್ತಿನಗರದಲ್ಲಿರುವ ಆರ್ಟಿಪಿಎಸ್ ಘಟಕದಲ್ಲಿ 8 ಘಟಕಗಳಲ್ಲಿ 4 ಘಟಕ ಬಂದ್ ಆಗಿವೆ. ಎರಡು ಘಟಕಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ರಾಜ್ಯಕ್ಕೆ ಸುಮಾರು 40% ವಿದ್ಯುತ್ ಪೂರೈಕೆ ಮಾಡುವ ಆರ್ಟಿಪಿಎಸ್ನಲ್ಲಿ ಕಳೆದ ಎರಡು ದಿನಗಳಿಂದ ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ 1,2,3 ಮತ್ತು 6 ಸೇರಿ ಒಟ್ಟು ನಾಲ್ಕು ಘಟಕಗಳು ಬಂದ್ ಆಗಿವೆ. ಸದ್ಯ ಸಿಬ್ಬಂದಿ 2 & 6ನೇ ಘಟಕಗಳ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ. ಸದ್ಯ 1&3 ಘಟಕಗಳಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. 1720 ಮೆ.ವ್ಯಾ. ವಿದ್ಯುತ್ ಉತ್ಪಾದನಾ ಸಾಮರ್ಥ್ಯವಿರುವ RTPSನಲ್ಲಿ 4 ಘಟಕ ಬಂದ್ ಆಗಿದ್ದರಿಂದ 903 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ವಿದ್ಯುತ್ ಸಮಸ್ಯೆ ಎದುರಾಗುವ ಭೀತಿ ಇದೆ.