ಮೈಸೂರು ಅ.11: ಮಂಗಳವಾರ ಮುಂಜಾನೆ ಮೈಸೂರಿನ ಟಿಕೆ ಲೇಔಟ್ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಸತ್ಯಮೂರ್ತಿ ಆರೋಪಿ. ಸತ್ಯಮೂರ್ತಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಕಲ್ಲು ಎಸೆದು ಪರಾರಿಯಾಗಿದ್ದನು. ಪ್ರಕರಣ ಸಂಬಂಧ ಆರೋಪಿ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್ 427 353 ಹಾಗೂ 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ನಂತರ ಸರಸ್ವತಿಪುರಂ ಇನ್ಸಪೆಕ್ಟರ್ ರವೀಂದ್ರ ನೇತೃತ್ವದ ತಂಡ ಆರೋಪಿಯ ಕಾರ್ಯಾಚರಣೆಗೆ ಇಳಿದಿತ್ತು. ಆರೋಪಿ ಸತ್ಯಮೂರ್ತಿ ಮೈಸೂರು ಹೊರವಲಯದಲ್ಲಿ ತಲೆ ಮರೆಸಿಕೊಂಡಿರುವ ಸುಳಿವು ಸಿಕ್ಕಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಆರೋಪಿ ಸತ್ಯಮೂರ್ತಿಯನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಸತ್ಯಮೂರ್ತಿ ಸಬ್ ಇನ್ಸಪೆಕ್ಟರ್ ಮಹೇಂದ್ರ ಹಾಗೂ ಇತರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಕೊನೆಗೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಆರೋಪಿ ಸತ್ಯಮೂರ್ತಿಯನ್ನು ಬಂಧಿಸಿದ್ದಾರೆ.
ಪೊಲೀಸರು ಆರೋಪಿ ಸತ್ಯಮೂರ್ತಿಯನ್ನು ಮೈಸೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾದೀಶರ ಮುಂದೆ ಹಾಜರುಪಡಿಸಿದರು. ಆರೋಪಿ ಸತ್ಯಮೂರ್ತಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ.