ಪ್ರತಿನಿಧಿ ವರದಿ ಕೊಳ್ಳೇಗಾಲ
ಲೋಕಸಭಾ ಚುನಾವಣೆ ಹಿನ್ನೆಲೆ ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನಾಧ್ಯಂತ ಇರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಏ.26 ರಂದು ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು ಎಂದು ಕಾರ್ಮಿಕ ನಿರೀಕ್ಷಕ ವಿ.ಎಲ್.ಪ್ರಸಾದ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಮತದಾನದ ದಿನದಂದು ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಸೂಚನೆ ನೀಡಿದೆ.
ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ(ರಾಷ್ಟ್ರೀಹಬ್ಬಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-3ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಲಂ(ಬಿ)ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಲಾಗಿದೆ. ಆದ್ದುದ್ದರಿಂದ ಏ.26 ರಂದು ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಅಂಗವಾಗಿ ಮತದಾನ ನಡೆಯಲಿರುವ ಹಿನ್ನೆಲೆ ಹನೂರು ಹಾಗೂ ಕೊಳ್ಳೇಗಾಲ ಭಾಗದಲ್ಲಿ ಕಾರ್ಮಿಕರಿಗೆ ಸಂಬಂಧಿಸಿದ ಅಂಗಡಿ ಮಾಲೀಕರು ವೇತನ ಸಹಿತ ರಜೆ ನೀಡಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
23ಕೆಜಿಎಲ್-1
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ವಲಯದ ಕಾರ್ಮಿಕ ನಿರೀಕ್ಷಕ ವಿ.ಎಲ್.ಪ್ರಸಾದ್ ಅವರ ಫೋಟೋ ಇದೆ.