ಪ್ರತಿನಿಧಿ ವರದಿ ಪಿರಿಯಾಪಟ್ಟಣ
ತಾಲೂಕಿನ ಬೆಳತೂರು ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾದೆ.
ಗ್ರಾಮದ ಮಂಜು ಎಂಬುವರಿಗೆ ಸೇರಿದ ಮೇಕೆಯಾಗಿದ್ದು, ಗ್ರಾಮವು ಮಲ್ಲಿನಾಥಪುರ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿದ್ದು, ಭಾನುವಾರ ರಾತ್ರಿ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ ಮೇಕೆಗಳ ಮೇಲೆ ದಾಳಿ ನಡೆಸಿರುವ ಚಿರತೆ ಮೇಕೆಯೊಂದನ್ನು ಎಳೆದೊಯ್ದು ಅರೆಬರೆ ತಿಂದು ಬಿಸಾಡಿದೆ. ಗ್ರಾಮದಲ್ಲಿ ಚಿರತೆ ಕಾಟ ಹೆಚ್ಚಾಗಿರುವುದರಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ. ಮೇಕೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಗ್ರಾಮದ ಮುಖಂಡ ಮನು ಅವರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆಯನ್ನು ಸೆರೆ ಹಿಡಿಯಲು ಗ್ರಾಮದಲ್ಲಿ ಬೋನನ್ನು ಇಟ್ಟಿದ್ದಾರೆ.