ಪ್ರತಿನಿಧಿ ವರದಿ ಬನ್ನೂರು
ಪಟ್ಟಣದ ಸಂತೆಮಳ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಶೇ.80, ವಾಣಿಜ್ಯ ವಿಭಾಗದಲ್ಲಿ ಶೇ.87, ವಿಜ್ಞಾನ ವಿಭಾಗದಲ್ಲಿ ಶೇ.90 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿ ಉತ್ತಮ ಫಲಿತಾಂಶ ತಂದು ಕೊಟ್ಟಿದ್ದಾರೆ ಎಂದು ಪ್ರಾಂಶುಪಾಲ ಗೂಳೇಗೌಡ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾದ 561 ವಿದ್ಯಾರ್ಥಿಗಳಲ್ಲಿ, 83 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 322 ವಿದ್ಯಾರ್ಥಿಗಳು ಪ್ರಥಮ ದರ್ಜೆ, 67 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 18 ವಿದ್ಯಾರ್ಥಿಗಳು ತೃತೀಯ ದರ್ಜೆ ಯಲ್ಲಿ ತೇರ್ಗಡೆಯಾಗಿ ಶೇ.87.34 ರಷ್ಟು ಫಲಿತಾಂಶ ಪಡೆದಿದೆ ಎಂದು ತಿಳಿಸಿದ್ದಾರೆ.
ವಿಜ್ಞಾನ ವಿಭಾಗದ ಚೇತನ್ ಕುಮಾರ ಮತ್ತು ಲಾಲಿತ್ಯ ರಾಜ್ಯದಲ್ಲೇ 8 ಮತ್ತು 9ನೇ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಎತ್ತಿಹಿಡಿದಿದ್ದಾರೆ ಎಂದು ತಿಳಿಸಿದರು.