ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದ್ದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಜಿಲ್ಲೆಯ ರಂಗಪಾಣಿ ಬಳಿ ನಡೆದಿದೆ. ಈ ಸಂಬಂಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಕಾಂಚನಜುಂಗಾ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿಸಿದ್ದಾರೆ.