ಸಿಎಂ ಸಿದ್ದರಾಮಯ್ಯ ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂಕೋರ್ಟ್ ನೀಡಿದ್ದ ಹಲವು ತೀರ್ಪುಗಳು ನನ್ನ ಕಣ್ಮುಂದೆ ಇದೆ. ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ನಲ್ಲಿ ಚರ್ಚೆ ಆಗಿದೆ. ಈ ಕೇಸ್ ಕೋರ್ಟ್ನಲ್ಲಿ ಇದ್ದಾಗ ರಾಜ್ಯ ಸರ್ಕಾರದ ನಿರ್ಧಾರ ತಪ್ಪು. ಕಾನೂನಿಗಿಂತ ದೊಡ್ಡವರು ಎಂಬುದನ್ನು ಪ್ರದರ್ಶನ ಮಾಡಿಕೊಂಡಿದ್ದಾರೆ. ಲೂಟಿ ಮಾಡುವವರಿಗೆ ನಮ್ಮ ಸರ್ಕಾರ ಎಂಬುದನ್ನು ನಿರೂಪಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.