ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛತಾ ಹಿ ಸೇವಾ-2024ರ ಅಂಗವಾಗಿ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಹಾಗೂ ಸ್ವಚ್ಛತಾ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪನಾಗ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೊನಾ ರೋತ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾನಾಗ್ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನಗಳನ್ನು ವಿತರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಪಂ ಡಿಎಸ್ ಪಿ.ಲಕ್ಷ್ಮೀ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ತಾಲೂಕು ಪಂಚಾಯಿತಿ ಇಒ ಪೂರ್ಣಿಮಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಪಿಎಲ್ಎಫ್ ಸ್ವಸಹಾಯ ಗುಂಪಿನ ಮಹಿಳೆಯರು ಕಾರ್ಯಕ್ರಮದಲ್ಲಿ ಇದ್ದರು.
26ಸಿಎಚ್ಎನ್.3:
ಚಿತ್ರವಿದೆ