ಕಾವೇರಿ ನೀರು ವಿಚಾರಕ್ಕೆ ಪ್ರಧಾನಿ ಮೋದಿ ಅವರಿಗೆ ಹೆಚ್ಡಿ ದೇವೇಗೌಡ ಅವರು ಪತ್ರ ಬರೆದ ವಿಚಾರವಾಗಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಪತ್ರ ಬರೆದಿರುವುದನ್ನು ಸ್ವಾಗತಿಸುತ್ತೇನೆ. ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ ಎಂದರು.