ಬೆಳಗಾವಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪುತ್ರ ಹೆಚ್.ಡಿ.ರೇವಣ್ಣರನ್ನ ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಮಹಿಳೆಯ ಕಿಡ್ನ್ಯಾಪ್ ಸುಳಿಯಲ್ಲಿ ಸಿಲುಕಿದ್ದ ರೇವಣ್ಣ ಇದೀಗ ಎಸ್ಐಟಿ ಬಲೆಗೆ ಬಿದ್ದಿದ್ದಾರೆ. ಸದ್ಯ ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹೆಚ್.ಡಿ.ರೇವಣ್ಣ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು. ಕಿಡ್ನ್ಯಾಪ್ ಆದ ಮಹಿಳೆ ಪತ್ತೆ ಬಗ್ಗೆ ಪೊಲೀಸರ ಜೊತೆ ಮಾತನಾಡುತ್ತೇನೆ. ಪ್ರಜ್ವಲ್ ನೇರವಾಗಿ ಕೋರ್ಟ್ಗೆ ಹಾಜರಾಗುತ್ತಾರೆ ಎಂಬ ಸಿಎಸ್ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ಸಿ.ಎಸ್.ಪುಟ್ಟರಾಜು ಅವರೇನು ಲಾಯರಾ? ಪೊಲೀಸರ ಜೊತೆ ಮಾತನಾಡಿ ಮತ್ತೆ ಮಾತನಾಡುತ್ತೇನೆ ಎಂದಿದ್ದಾರೆ.