ಪ್ರತಿನಿಧಿ ವರದಿ ಬೆಟ್ಟದಪುರ
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಡಿಟಿಎಂಎನ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಸಂಸ್ಥೆ ವಿದ್ಯಾರ್ಥಿಗಳು ದೇಶಭಕ್ತಿಗೆ ನೃತ್ಯ ಮಾಡುವ ಮೂಲಕ ಎಲ್ಲರ ಗಮನ ಸೆಳೆದರೂ.
ನಿವೇಶನ ದಾನಿ ಸರೋಜಮ್ಮ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಶ್ರೀಶೈಲ, ಆಡಳಿತಾಧಿಕಾರಿ ನಟರಾಜ್, ನಿರ್ದೇಶಕ ವಿಜಯಕುಮಾರ, ಕೃಷ್ಣಮೂರ್ತಿ ಪ್ರಾಂಶುಪಾಲ ಸತೀಶ್, ಮುಖ್ಯಶಿಕ್ಷಕ ಮುರುಳಿ ಕೃಷ್ಣ, ಜಯಂತಿ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.