78ನೇ ಸ್ವಾತಂತ್ರ ದಿನಾಚರಣೆ ಹಿನ್ನೆಲೆ ಮೈಸೂರಿನ ಬಿಜೆಪಿ ಹಾಗೂ ಕಾಂಗ್ರೆಸ್ ಕಚೇರಿಗಳಲ್ಲಿ ಸ್ವಾತಂತ್ರ ದಿನವನ್ನು ಆಚರಿಲಾಯಿತು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸ್ವತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಧ್ವಜಾರೋಹಣ ನೆರವೇರಿಸಿ ಬಳಿಕ ಭಾರತಾಂಭೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ವೇಳೆ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ, ಮೈವಿ ರವಿಶಂಕರ್, ಮಾಜಿ ಉಪಮೇಯರ್ ಶೈಲೆಂದ್ರ, ಗಿರಿಧರ್ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಅಂತೆಯೇ ಮೈಸೂರಿನ ಕಾಂಗ್ರೆಸ್ ಭವನದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್ ಹಾಗೂ ಗಣ್ಯರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮಾಜಿ ಮೇಯರ್ ಗಳಾದ ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಮೋದಾಮಣಿ ಇನ್ನಿತರರು ಭಾಗಿಯಾಗಿದ್ದರು.