ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಸಿನಿಮಾ ಕೆಲಸ ಹಾಗೂ ರಾಜಕೀಯ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಅವರ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇವರಿಗೆ ಜಗ್ಗೇಶ್ ಬಿಸಿ ಮುಟ್ಟಿಸಿದ್ದಾರೆ. ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.