ಪ್ರತಿನಿಧಿ ವರದಿ ಕೆ.ಆರ್.ನಗರ
ಪಟ್ಟಣದ ಶ್ರೀರಾಮ ಬಡಾವಣೆಯಲ್ಲಿರುವ ಹೆಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ಏ,2 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಜಂಟಿ ಸಮನ್ವಯ ಸಭೆ ನಡೆಯಲಿದೆ.
ಮಾಜಿ ಸಚಿವ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮತ್ತು ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಕೆಗೆ ಇಲಿಂದ ಮಂಡ್ಯಕ್ಕೆ ತೆರಳುವ ಬಗ್ಗೆ ಕುರಿತಂತೆ ಚರ್ಚೆ ನಡೆಯಲಿದೆ.
ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ತಾಲೂಕು ಘಟಕಗಳ ಅಧ್ಯಕ್ಷರು, ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದು. ಸಭೆಗೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಯಶಸ್ವಿಗೊಳಿಸಿಕೊಡಬೇಕೆಂದು ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.