ಯಾದಗಿರಿ: ರಾಜ್ಯದಲ್ಲಿ ಆರಂಭಿಕ ಕಾಲದಲ್ಲಿ ಬಿಜೆಪಿ ಸಂಘಟನೆ ಮಾಡಿದವರಲ್ಲಿ ಒಬ್ಬರಾದ ಯಾದಗಿರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನೀಲಕಂಠರಾಯ ಯಲ್ಹೇರಿ ಬೈಕ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಇದರ ಬೆನ್ನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ.
ಯಾದಗಿರಿ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ ಇಂದು ಮಧ್ಯಾಹ್ನ ಬೈಕ್-ಕ್ರೂಷರ್ ವಾಹನ ಡಿಕ್ಕಿಯಾಗಿ ಜೆಪಿ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಎಲ್ಹೇರಿ (48) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಬೈಕ್ ಮೇಲೆ ತೆರಳುತ್ತಿದ್ದ ನೀಲಕಂಠರಾಯ ಎಲ್ಹೇರಿ ಅವರಿಗೆ ಎದರುಗಡೆಯಿಂದ ವೇಗವಾಗಿ ಬಂದ ಕ್ರೂಷರ್ ವಾಹನ ಡಿಕ್ಕಿ ಹೊಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ತಗ್ಗು ಗುಂಡಿ ತಪ್ಪಿಸಿಕೊಳ್ಳಲು ಹೋದಾಗ ಬೈಕ್ ಹಾಗೂ ಕ್ರೂಷರ್ ನಡುವೆ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ, ವಾರಸುದಾರರಿಗೆ ಒಪ್ಪಿಸಲಾಗುತ್ತಿದೆ.