ಸಚಿವರ ಮುಂದೆಯೇ ಅಧಿಕಾರಿಗೆ ರೈತ ತರಾಟೆ ತೆಗೆದುಕೊಂಡ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಮರಡಿಯೂರು ಗ್ರಾಮದಲ್ಲಿ ಘಟನೆ ನಡೆದಿದೆ.ಪಶು ಸಂಗೋಪನೆ ಸಚಿವ ಕೆ ವೆಂಕಟೇಶ್ ಮುಂದೆ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತ ಸಕತ್ತಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾನೆ.
ರೈತ ತರಾಟೆಗೆ ತೆಗೆದುಕೊಳ್ಳುತ್ತಿದ್ದರೂ ವೇದಿಕೆ ಮೇಲೆ ಮೂಕ ಪ್ರೇಕ್ಷಕನಂತೆ ಕುಳಿತಿದ್ದ ಸಚಿವ ಕೆ ವೆಂಕಟೇಶ್ ತಬ್ಬಿಬ್ಬಾಗಿದ್ದಾರೆ. ಪಿರಿಯಾಪಟ್ಟಣ ತಾಲೂಕಿನಲ್ಲಿರುವ ಕಂದಾಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನ, ರಾಜ್ಯದ ಯಾವ ತಾಲೂಕಿನಲ್ಲೂ ಇಲ್ಲ. ಮರಡಿಯೂರು ಗ್ರಾಮದ ಪೋಡಿ ವಿಚಾರದಲ್ಲಿ ಬರೋಬ್ಬರಿ ಹದಿನಾಲ್ಕು ವರ್ಷದಿಂದ ಅಧಿಕಾರಿಗಳು ಏನನ್ನೂ ಮಾಡಿಲ್ಲ. ಯಾರಾದರೂ ಬಡಾವಣೆ ಮಾಡಲು ಬಂದರೆ ಆ ಕೆಲಸಗಳನ್ನು ಕ್ಷಣಾರ್ಧದಲ್ಲಿ ಮುಗಿಸುತ್ತಾರೆ.ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ಸಚಿವರಿಗೆ ದೂರು ನೀಡಲಾಗಿದೆ. ಹಾಗೂ ಒಂದು ತಿಂಗಳಲ್ಲಿ ಗ್ರಾಮಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಇತ್ಯರ್ಥಗೊಳ್ಳದಿದ್ದಲ್ಲಿ ಅಧಿಕಾರಿಗಳು ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೈತ ಖಡಕ್ ಎಚ್ಚರಿಕೆ ನೀಡಿದ್ದಾನೆ.