ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್ಎಸ್ಎಲ್ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಹಿಂಪಡೆದಿದೆ. ಬುಧವಾರ ಹೊರಡಿಸಿರುವ ಪರಿಷ್ಕೃತ ಆದೇಶದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಿ ಎಸ್ಎಸ್ಎಲ್ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಮಂಡಳಿ ತಿಳಿಸಿತ್ತು. ಪುಟ್ಟಣ್ಣ, ಮರಿತಿಬ್ಬೇಗೌಡ ಸೇರಿದಂತೆ ವಿವಿಧ ಶಾಸಕರು ಹಾಗೂ ಶಿಕ್ಷಕ ಸಮುದಾಯ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಕೆಎಸ್ಇಎಬಿ ಪರಿಷ್ಕೃತ ಆದೇಶ ಹೊರಡಿಸಿದೆ.
ಅವ್ಯವಹಾರ ತಪ್ಪಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಈ ಬಾರಿ ಪ್ರೌಢಶಾಲಾ ಶಿಕ್ಷಕರನ್ನು ಕೊಠಡಿ ಪರಿವೀಕ್ಷಕರನ್ನಾಗಿ ಮಾಡದಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿತ್ತು. ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಕ್ಲಸ್ಟರ್ ಹೊರತಾದ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರಕರಾಗಿ ಹಾಗೂ ಪರೀಕ್ಷೆಯ ಇತರೆ ಕಾರ್ಯಗಳಿಗೆ ನಿಯೋಜಿಸಬೇಕು. ಆಯಾ ವಿಷಯಗಳ ಶಿಕ್ಷಕರನ್ನು ಅದೇ ವಿಷಯದ ದಿನ ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಸೂಚಿಸಿತ್ತು. ಆದರೆ ಈಗ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್ಎಸ್ಎಲ್ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಹಿಂಪಡೆದಿದೆ.