ಮಡಿಕೇರಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಾಷ್ಟ್ರದಲ್ಲಿ ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಅಪಾರ ಶ್ರಮ ಪಟ್ಟಿದ್ದು, ಅವರ ಆಶಯದಂತೆ ಮುಂದೆ ಸಾಗೋಣ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಅರಿತು ಅವುಗಳನ್ನು ಪಾಲಿಸಬೇಕಿದೆ. ಸನ್ಮಾರ್ಗದಲ್ಲಿ ನಡೆಯುವ ಮೂಲಕ ಯುವಸಮೂಹ ಉತ್ತಮ ಜೀವನ ರೂಪಿಸಿಕೊಳ್ಳಲು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ ಮಾತನಾಡಿ, ಡಾ. ಅಂಬೇಡ್ಕರ ಅಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಉಪವಿಭಾಗಾಧಿಕಾರಿ ವಿನಾಯಕ ನಾರ್ವೇ, ನ್ಯಾಯವಾದಿ ರಾಜಶೇಖರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಅಪರ ಜಿಲ್ಲಾಧಿಕಾರಿ ವೀಣಾ, ತಹಸೀಲ್ದಾರ್ ರಮೇಶಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ ಇದ್ದರು.
ಪ್ರಭಂದ ಹಾಗೂ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.
ಫೋಟೋ 14 ಎಂಡಿಕೆ 02 ; ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.