ಮೈಸೂರು: ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ ಕೆಲಸಕ್ಕೆ ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಕ್ರೈಮ್ ನಡೆಯುವ ಮುನ್ನವೇ ಇವರೇ ಕೆಲವು ಅಧಿಕಾರಿಗಳನ್ನು ಬೆದರಿಸಿ, ಸಹಿ ಮಾಡಿಸಿಕೊಳ್ಳುವ ಕೆಲಸಕ್ಕೆ ಇಡಿ ಮುಂದಾಗಿದೆ ಎಂದು ಕೆಪಿಸಿಸಿ ವಕ್ತಾರ ಆರೋಪಿಸಿದ್ದಾರೆ.
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ಇಡಿ ತಂಡದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಮುಡಾ ಕಚೇರಿ ಮೇಲೆ ಇಡಿ ಇಲಾಖೆ ದಾಳಿ ಮಾಡಿದೆ. ಎರಡು ದಿನಗಳ ದಾಳಿಯಲ್ಲಿ ಅನೇಕ ದಾಖಲೆಗಳನ್ನು ಕೊಂಡೊಯ್ಯಲಾಗಿದೆ. ಯಾವುದಾದರೂ ತನಿಖಾ ಸಂಸ್ಥೆ ವರದಿ ನೀಡಿ ಮನಿ ಲಾಂಡ್ರಿಗ್ ಆಗಿದ್ದರೆ, ಹಣದ ಅವ್ಯವಹಾರ ಆಗಿದ್ದರೆ ಮಾತ್ರ ಇಡಿ ಎಂಟ್ರಿ ಆಗಬೇಕು. ಲೋಕಾಯುಕ್ತ ಮತ್ತು ನ್ಯಾಯಧೀಶರ ತನಿಖಾ ತಂಡ ತನಿಖೆ ಮಾಡುವ ಹಂತದಲ್ಲೇ ಇಡಿ ಎಂಟ್ರಿಯಾಗಿದೆ. ಇದು ಸಿದ್ದರಾಮಯ್ಯನವರನ್ನು ಬೆದರಿಸುವ ಕೆಲಸವಷ್ಟೇ ಎಂದಿದ್ದಾರೆ. ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ ಕೆಲಸಕ್ಕೆ ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಕ್ರೈಮ್ ನಡೆಯುವ ಮುನ್ನವೇ ಇವರೇ ಕೆಲವು ಅಧಿಕಾರಿಗಳನ್ನು ಬೆದರಿಸಿ, ಸಹಿ ಮಾಡಿಸಿಕೊಳ್ಳುವ ಕೆಲಸಕ್ಕೆ ಇಡಿ ಮುಂದಾಗಿದೆ. ಇಡಿ ಅಧಿಕಾರಿಗಳ ನಡೆಯ ಬಗ್ಗೆ ಕೋರ್ಟ್ ಗಮನಕ್ಕೆ ತರುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಎಂ ಲಕ್ಷ್ಮಣ್ ಗೆ ಸಾಥ್ ನೀಡಿದರು.