ಕೋಲಾರ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದರು.
ನಗರದ ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಮೈತ್ರಿ ನಾಯಕರು ಸಾವಿರಾರು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮ್ಮುಖದಲ್ಲಿ ಮೆಕ್ಕೆ ವೃತ್ತದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು
ನಾಮಪತ್ರ ಸಲ್ಲಿಕೆ ನಂತರ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ ದೇವೇಗೌಡ ಮಾತನಾಡಿ, ಸದೃಢ ಭಾರತ ಕಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಗಲಿರುಳು ಶ್ರಮಿಸುತ್ತಿದ್ದಾರೆ ಅಂತಹವರನ್ನು ಕೇವಲ ದೇಶಕ್ಕೆ ಮಾತ್ರವಲ್ಲದೆ ವಿಶ್ವದ ಎಲ್ಲಾ ನಾಯಕರು ಗೌರವದಿಂದ ಕಾಣುತ್ತಾರೆ ಆದರೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಏಕವಚನದಲ್ಲಿ ಮಾತನಾಡುತ್ತಾರೆ ರಾಜ್ಯದ ಖಜಾನೆಯನ್ನು ಲೂಟಿ ಹೊಡೆಯಲು ಕಾಂಗ್ರೆಸ್ ನಾಯಕರು ಶಪಥ ಮಾಡಿದ್ದಾರೆ ಎಂದು ತಿಳಿಸಿದರು
ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ ಎಸ್.ಮುನಿಸ್ವಾಮಿ ಮಾತನಾಡಿದರು.
ಬೃಹತ್ ಮೆರವಣಿಗೆಯಲ್ಲಿ ಶಾಸಕರಾದ ಜಿ.ಕೆ ವೆಂಕಟಶಿವಾರೆಡ್ಡಿ, ಸಮೃದ್ದಿ ಮಂಜುನಾಥ್, ಎಂ.ರವಿಕುಮಾರ್, ಮಾಜಿ ಶಾಸಕರಾದ ಜೆ.ಕೆ ಕೃಷ್ಣಾರೆಡ್ಡಿ, ವರ್ತೂರು ಆರ್.ಪ್ರಕಾಶ್, ಮಂಜುನಾಥಗೌಡ, ಎಂ.ನಾರಾಯಣಸ್ವಾಮಿ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್, ಜಿ.ಇ ರಾಮೇಗೌಡ ಸೇರಿದಂತೆ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು…
ಮಾಜಿ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ರಾಜ್ಯಕ್ಕೆ ಭೀಕರ ಬರ ಆವರಿಸಿತು, ರಾಜ್ಯದಲ್ಲಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಆಗದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸ್ತಾರೆ ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅದಷ್ಟಕ್ಕೇ ಅದೇ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು…