ತುಮಕೂರು : ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವಂತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ತುಮಕೂರಿನ ಗಾಜಿನ ಮನೆ ಅಮಾನಿಕೆರೆ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರವೇ ತೆರಳುವ ಕಾರ್ಯಕ್ರಮ ಜನತಾ ದರ್ಶನ ಕಾರ್ಯಕ್ರಮವಾಗಿದ್ದು, ಈ ಮೂಲಕ ನಮ್ಮ ಸರ್ಕಾರ ಜನಪರ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದು, ನುಡಿದಂತೆ ನಡೆಯುತ್ತಿದ್ದೇವೆ ಎಂದು ತಿಳಿಸಿದರು.