ಮೈಸೂರು: ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ. 12 ಸಾವಿರ ಶಿಕ್ಷಕರನ್ನ ಈಗ ನೇಮಕ ಮಾಡಲಾಗಿದ್ದು ಹಂತಹಂತವಾಗಿ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ಯೋಜನೆ ಕಾರಣ. ಅದೇ ರೀತಿ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಪರಿಷತ್ ಚುನಾವಣೆ ಅಭ್ಯರ್ಥಿಗಳ ಪರವಾಗಿ ಮತಯಾಚನೆಗೆ ಬಂದಿದ್ದೇನೆ.ಮರಿತಿಬ್ಬೆಗೌಡರು ಶಿಕ್ಷಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸದನದಲ್ಲಿ ಮರಿತಿಬ್ಬೆಗೌಡರು ಹೋರಾಟ ಮಾಡುತ್ತಾರೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿವೆ. ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ. 12 ಸಾವಿರ ಶಿಕ್ಷಕರನ್ನ ಈಗ ನೇಮಕ ಮಾಡಲಾಗಿದೆ. ಅನುದಾನಿತ ಶಾಲೆಗಳ 6 ಸಾವಿರ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ ಎಲ್ಲಾ ಸಮಸ್ಯೆಯನ್ನ ಬಗೆಹರಿಸುತ್ತೇವೆ. ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದರು ಸಚಿವ ಮಧು ಬಂಗಾರಪ್ಪ ತಿಳಿಸಿದರು.