ಗ್ರಾಮೀಣ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಿಶ್ವಮಾನ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಸಂಕಲ್ಪರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ. ಎನ್ಇಪಿಯಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಎಂದು ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ನಗರದ ಲಿಂಗರಾಜ ಮಹಾವಿದ್ಯಾಲಯದ ಸಭಾಭವನದಲ್ಲಿ ಪೀಪಲ್ಸ್ ಫೋರ್ಂ ಫಾರ್ ಕರ್ನಾಟಕ ಎಜುಕೇಷನ್ ನೇತೃತ್ವದಲ್ಲಿ ಮಂಗಳವಾರ ಜರುಗಿದ ಎನ್ಇಪಿ 2020 ಮತ್ತು ಶಿಕ್ಷಣ ತಜ್ಞರ ವಿಶೇಷ ಸಭೆಯಲ್ಲಿ ಮಾತನಾಡಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಸಹಜವಾಗಿ ಕೇಂದ್ರದ ಸಿಬಿಎಸ್ಸಿ ಪಠ್ಯಕ್ರಮ ಅಳವಡಿಸಿಕೊಂಡು ಎನ್ಇಪಿ ಶಿಕ್ಷಣ ಒದಗಿಸುತ್ತದೆ. ಆದರೆ, ಸಂಕುಚಿತ ರಾಜಕೀಯ ಮನಸ್ಥಿತಿ ಹೊಂದಿದ ರಾಜ್ಯದ ಸರ್ಕಾರದ ನಾಯಕರಿಂದ ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವ ಧೋರಣೆ ಹೊಂದಿರುವುದು ಖಂಡನೀಯ. ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರುವ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎನ್ಇಪಿ ರದ್ದು ಮಾಡುತ್ತಿರುವ ವಿರುದ್ಧ ಧ್ವನಿ ಎತ್ತಬೇಕು ಎಂದರು.