ಲೋಕಸಭೆ ಚುನಾವಣೆಗೆ ಮುನ್ನ, ಹಿಸಾರ್ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ಅವರು ರಾಜಕೀಯ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ರಾಜೀನಾಮೆ ಘೋಷಿಸಿದ ನಂತರ, ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ ಬ್ರಿಜೇಂದ್ರ ಸಿಂಗ್ ಅವರು ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸವನ್ನು ತಲುಪಿ ವಿರೋಧ ಪಕ್ಷಕ್ಕೆ ಸೇರಿದರು.
ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನ ಮಂತ್ರಿ. ನರೇಂದ್ರ ಮೋದಿ ಮತ್ತು ಶಾ ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬ್ರಿಜೇಂದ್ರ ಸಿಂಗ್ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಬ್ರಿಜೇಂದ್ರ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಕೂಡ ಖರ್ಗೆ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು.