ಪ್ರತಿನಿಧಿ ವರದಿ ಕೊಳ್ಳೇಗಾಲ
ನೂತನ ಸಂಸದ ಸುನೀಲ್ ಬೋಸ್ ಅವರಿಗೆ ಸನ್ಮಾನ ಹಾಗೂ ಮಾಜಿ ಶಾಸಕರೂ ಆದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರಿಗೆ 74ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ಅವರು ಭಾನುವಾರ ಈ ಕುರಿತು ಪಟ್ಟಣದಲ್ಲಿ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರಲ್ಲದೇ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್.ಜಯಣ್ಣ ಅಭಿಮಾನಿಗಳು ಆಗಮಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಕೆಎಂಎಫ್ ನಿರ್ದೇಶಕ ಎಂ.ನಂಜುಂಡಸ್ವಾಮಿ ಮಾತನಾಡಿ, ಅಜಾತಶತ್ರು ಎಂದೇ ಹೆಸರುವಾಸಿಯಾಗಿರುವ ಎಸ್.ಜಯಣ್ಣ ಅವರು 2 ಬಾರಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಶಾಸಕರಾಗಿ, ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅಂತೆಯೇ, ನೂತನ ಸಂಸದ ಸುನೀಲ್ ಬೋಸ್ ಅವರು ಕೂಡ ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾರೆ ಎಂಬ ನಿರೀಕ್ಷೆಯೊಂದಿಗೆ ಸನ್ಮಾನ ಕಾರ್ಯಕ್ರಮವನ್ನು ಎಸ್.ಜಯಣ್ಣ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಆರ್.ಕೃಷ್ಣಮೂರ್ತಿ ವಹಿಸಲಿದ್ದಾರೆ. ಜಿಲ್ಲೆಯ ಇತರ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ನಗರಸಭಾ ಸದಸ್ಯರಾದ ಮನೋಹರ್, ಎಸ್.ಮಂಜುನಾಥ್, ಜಿಪಂ ಮಾಜಿ ಉಪಾಧ್ಯಕ್ಷ ಕೊಪ್ಪಾಳಿ ಮಹದೇವನಾಯಕ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಬಸವಣ್ಣ, ನಗರಸಭೆ ಮಾಜಿ ಅಧ್ಯಕ್ಷ ಪಿ.ಮಲ್ಲಿಕಾರ್ಜುನ, ನಗರಸಭಾ ಮಾಜಿ ಉಪಾಧ್ಯಕ್ಷರಾದ ಅಕ್ಮಲ್ಪಾಷ, ಕಲೀಮುಲ್ಲಾ, ಎಸ್.ಜಯಣ್ಣ ಅಭಿಮಾನಿಗಳ ಬಳಗದ ಮುಖಂಡರಾದ ವಡಗೆರೆ ಮಹದೇವಸ್ವಾಮಿ, ಉದಯಕುಮಾರ್, ಬಸ್ತಿಪುರ ಪ್ರಕಾಶ್ ಸೇರಿ ಇತರರು ಇದ್ದರು.
8ಕೆಜಿಎಲ್-3
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಪಿಡಬ್ಲುö್ಯಡಿ ಐಬಿಯಲ್ಲಿ ಭಾನುವಾರ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ಮಾತನಾಡಿದರು.