ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ನಿವೇಶನನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಲೋಕಾಯುಕ್ತ ತನಿಖೆ ಚುರುಕುಗೊಂಡಿದೆ. ಮತ್ತೊಂದೆಡೆ ಪ್ರಾಧಿಕಾರದ ಭ್ರಷ್ಟಾಚಾರಕ್ಕೆ ಮೊದಲ ತಲೆದಂಡವಾಗುವ ಸಾಧ್ಯತೆ ಎದುರಾಗಿದ್ದು, ಮಹತ್ವದ ಬೆಳವಣಿಗೆಯಲ್ಲಿ ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಯಾವುದೇ ಕ್ಷಣದಲ್ಲಿ ಮುಡಾದ ಅಧ್ಯಕ್ಷ ಕೆ ಮರೀಗೌಡ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಭ್ಯ ಆಗಿದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ಪ್ರಕರಣದ ಎಫೆಕ್ಟ್ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕಿದೆ. ಹೀಗಾಗಿ ಡ್ಯಾಮೇಜ್ ಕಂಟ್ರೋಲ್ ಮಾಡೋಕೆ ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೆ ಮರೀಗೌಡಗೆ ಸೂಚನೆ ನೀಡಲಾಗಿದೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಕೆ ಮರಿಗೌಡ ರಾಜೀನಾಮೆ ಕೊಡುವ ಸಾಧ್ಯತೆ ಇದೆ.