ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2,092,222 ಮತದಾರರಿದ್ದಾರೆ. ಈ ಪೈಕಿ ಪುರುಷರು 1026324, ಮಹಿಳೆಯರು 1065714, ಇತರರು 184 ಇದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಮಾಹಿತಿ ನೀಡಿದ್ದಾರೆ. ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಒಟ್ಟು 2202 ಮತಗಟ್ಟೆಗಳು ಸ್ಥಾಪನೆಯಾಗಿದೆ. 9809 ಮತಗಟ್ಟೆ ಸಿಬ್ಬಂದಿಗಳು ನೇಮಕಗೊಂಡಿದ್ದಾರೆ. ಏಪ್ರಿಲ್ 26ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತಚಲಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಮತಚಲಾಯಿಸಿದ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲು ವ್ಯವಸ್ಥೆ ಮಾಡಲಾಗಿದೆ. ಇನ್ನು 473 ಕೆ ಎಸ್ ಆರ್ ಟಿ ಸಿ ಬಸ್ಸುಗಳು, 33 ಜೀಪ್ ಗಳು, 79 ಮಿನಿ ಬಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಮಾಹಿತಿ ನೀಡಿದ್ದಾರೆ.