ವಯನಾಡಿನಲ್ಲಿ ಏಪ್ರಿಲ್ 26ರಂದು ಮತದಾನ ಮುಗಿದ ಬಳಿಕ ರಾಹುಲ್ ಗಾಂಧಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ, ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದರು. 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲೂ ಜನಬೆಂಬಲ ಪಡೆಯುವುದು ಕಷ್ಟವಾಗಿರುವುದರಿಂದ ಅಲ್ಲಿಂದಲೂ ಓಡಿಹೋಗುವುತ್ತಾರೆ ಎಂದು ಮೋದಿ ಟೀಕಿಸಿದ್ದಾರೆ.
ವಯನಾಡ್ನಿಂದ ಎರಡನೇ ಅವಧಿಗೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. 2019 ರಲ್ಲಿ, ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ವಯನಾಡ್ ಮತ್ತು ಅಮೇಥಿಯಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತರು. ಆದರೆ ಅವರು ವಯನಾಡಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.
ಇಂಡಿಯಾ ಒಕ್ಕೂಟದ ನಾಯಕರ್ಯಾರು ಎಂಬುದನ್ನು ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ.
ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಮೇ 20 ರವರೆಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಂದೇಡ್ನಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಪಕ್ಷದ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುದನ್ನು ಹೆಚ್ಚಿನ ಮತದಾನದ ಶೇಕಡಾವಾರು ತೋರಿಸುತ್ತದೆ ಎಂದು ಮೋದಿ ಹೇಳಿದರು.