ಮೈಸೂರು, ಏಪ್ರಿಲ್ 24, 2025 : ಜಮ್ಮು-ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ವಕೀಲರಿಂದ ಪ್ರತಿಭಟನೆ ನಡೆಸಲಾಯ್ತು.

ಮೈಸೂರು ವಕೀಲರ ಸಂಘದಿಂದ ಪ್ರತಿಭಟಗೆ ಕರೆ ನೀಡಲಾಗಿದ್ದು, ಈ ಹಿನ್ನಲೆ ಇಂದಿನ ಕಾರ್ಯ ಕಲಾಪಗಳಿಂದ ದೂರ ಉಳಿದ ವಕೀಲರು ನ್ಯಾಯಾಲಯದ ಮುಂದೆ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಮೈಸೂರಿನ ನ್ಯಾಯಾಲಯದ ಸನಿಹದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು, ನೂರಾರು ವಕೀಲರು ಭಾಗಿಯಾಗಿ ನೆರೆಯ ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ಥಾನದ ವಿರುದ್ಧ ಭಾರತ ಯುದ್ದ ಸಾರುವಂತೆ ಆಗ್ರಹಿಸಿದರು.
