ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಂಟಿಯಾಗಿ ಸ್ಪರ್ಧಿಸುತ್ತಿರುವುದರಿಂದ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಚರ್ಚೆ ನಡೆಸಿದ್ದಾರೆ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರ ಕೂಡ ಜೆಡಿಎಸ್ಗೆ ಬಿಟ್ಟು ಕೊಡಲು ನಿನ್ನೆಯ ಸಭೆಯಲ್ಲಿ ನಿರ್ಧಾರವಾಗಿದೆ. ನಿಮ್ಮ 3 ಅಭ್ಯರ್ಥಿಗಳನ್ನ ನೀವೇ ಘೋಷಣೆ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ. ಹಾಸನ, ಮಂಡ್ಯ ಜೊತೆಗೆ ಕೋಲಾರ ಕೂಡ ಜೆಡಿಎಸ್ ಪಾಲಿಗೆ ಸಿಕ್ಕಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತೆ. ಹಾಸನದಿಂದ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಸಿ.ಎಸ್. ಪುಟ್ಟರಾಜು, ಕೋಲಾರದಿಂದ ಶಾಸಕ ಸಮೃದ್ಧಿ ಮಂಜುನಾಥ್ ಅಥವಾ ಮಲ್ಲೇಶ್ ಬಾಬು ಸ್ಪರ್ಧಿಸಲಿದ್ದಾರೆ. ಇನ್ನು ಹೆಚ್ಡಿ ಕುಮಾರಸ್ವಾಮಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಮೀಟಿಂಗ್ನಲ್ಲಿ ಅಮಿತ್ ಶಾ ಮತ್ತೆ ಒತ್ತಡ ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.