ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿದೆ. ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆ ವರದಿ ಪ್ರಕಾರ ಜಾಗತಿಕ ಸಂಚಾರ ದಟ್ಟಣೆಯ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದ ಬೆಂಗಳೂರು ಆರನೇ ಸ್ಥಾನಕ್ಕೆ ಇಳಿದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಂಚಾರ ದಟ್ಟಣೆಯಲ್ಲಿ ಬೆಂಗಳೂರು ನಗರ 2022ರಲ್ಲಿ ಎರಡನೇ ಸ್ಥಾನದಲ್ಲಿತ್ತು. 2023ರಲ್ಲಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಟಾಮ್ ವರದಿ ನೀಡಿದೆ ತಿಳಿಸಿದರು. ಹಲವು ಸುಧಾರಣೆಗಳ ಮೂಲಕ ಸಂಚಾರ ದಟ್ಟಣೆಯನ್ನು ನಿಯಂತ್ರಣ ತರಲಾಗಿದೆ. ಸುಗಮ ಸಂಚಾರಕ್ಕೆ ಜಂಕ್ಷನ್ಗಳಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಅಥವಾ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅತ್ಯಾಧುನಿಕ ಡ್ರೋಣ್, ಸಿಸಿಟಿವಿಇತರೆ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲಾಗಿದೆ. ಟ್ರಾಫಿಕ್ ಬಸ್ ಸ್ಟಾಪ್ ಸ್ಥಳಾಂತರ, ಯೂಟರ್ನ್ ಮುಚ್ಚುವಿಕೆ, ಸಿಗ್ನಲ್ ಹಂತ ಬದಲಾವಣೆ ಹೀಗೆ ವಿವಿಧ ಕ್ರಮಗಳಿಂದ ವಾಹನ ದಟ್ಟಣೆ ಪ್ರಮಾಣ ಕಡಿಮೆಯಾಗಿದೆ. ಪ್ರಯಾಣದ ಸಮಯ ಕಡಿಮೆ ಮಾಡಿದ ಟಾಪ್ 10 ಪಟ್ಟಿಯಲ್ಲಿ ಬೆಂಗಳೂರು ನಂಬರ್ ಒನ್ನಲ್ಲಿದೆ ಎಂದು ತಿಳಿಸಿದರು.