ಮೈಸೂರು: ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ತೆರಳಿ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ರಾಡಿಸನ್ ಬ್ಲೂ ಹೋಟೆಲ್ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.