ಬೆಂಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಜೆಡಿಎಸ್ ಗೆ ಸಮಾಧಾನ ಆಗುವಂಥ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಜೆಡಿಎಸ್ ಅಸಮಾಧಾನ & ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈಗಿನ ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತಪ್ಪು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಜೆಡಿಎಸ್ ಮತ್ತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.