ಮೈಸೂರು ಕೊಡಗು ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಅಹಿಂದ ಮತಗಳ ಸೆಳೆಯಲು ಬಿಜೆಪಿ ಪಕ್ಷ ಮುಂದಾಗಿದೆ. ಮೈಸೂರಿನ ಖಾಸಗಿ ಸಮುದಾಯ ಭವನದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಸಮ್ಮೇಳನ ಸಮಾವೇಶವನ್ನು ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಆಯೋಜನೆ ಮಾಡಲಾಗಿದ್ದು, ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಇನ್ನು ಸಮಾವೇಶದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಟಿ ಎಸ್ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯಾ, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಅಲ್ಪ ಸಂಖ್ಯತ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಮಾಜಿ ಉಪಮೇಯರ್ ರೂಪ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದರು.