ಬೆಂಗಳೂರು : ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು. ಈ ವಿಚಾರವಾಗಿ ಶಾಸಕ ಕೆ ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದು, ಅವನು ಮಾತನಾಡಿರುವ ವಿಚಾರಗಳನ್ನು ಈಗ ಬಹಿರಂಗಪಡಿಸಲು ಆಗದು. ಆತ ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೂಡ ಬೆದರಿಕೆ ಹಾಕಿದ್ದ. ಪದ್ಮರಾಜು ಮಗಳಿಗೂ ನಾನೇ ಕೆಲಸ ಕೊಡಿಸಿದ್ದೇನೆ ಎಂದು ತಿಳಿಸಿದ್ದಾರೆ.