ಬೆಂಗಳೂರು: ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ಸಭೆ ಕರೆಯಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾವಹಿಸಲಿದ್ದಾರೆ.