ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿ, ಲೋಕಾಯುಕ್ತ ತನಿಖೆಗೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ.ಕೆ.ಸೋಮಶೇಖರ್, ನ್ಯಾ.ಉಮೇಶ್ ಎಂ.ಅಡಿಗರ ಅವರು ಇದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದೆ.