ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಚಿತ್ರದುರ್ಗ ಜಿಲ್ಲೆ ಬಂದ್ಗೆ ಕರೆ ಕೊಡಲಾಗಿದೆ.ಚಿತ್ರದುರ್ಗ ಜಿಲ್ಲೆ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದ್ದು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಬಂದ್ಗೆ ಬೆಂಬಲಿಸಿವೆ. ಇಂದು ಬೆಳಗ್ಗೆ 6:30ರಿಂದ ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.