ಮೈಸೂರು : ಮಗನನ್ನ ನಿಲ್ಲಿಸುವಾಗ ಯಾರ ಇಚ್ಚೇ ಇತ್ತು. ಈಗ ದೇವರು ಎಂದರೆ ಆಗ ಯಾರಿದ್ದರು ಎಂದು ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ. ಈ ಬಾರಿ ಜೆಡಿಎಸ್ ನವರು ಮೂರು ಮೂರರಲ್ಲೂ ಸೋಲುತ್ತಾರೆ. ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ.ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದ್ದಾರೆ ಎಂದರೇ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ. ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು. ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ.ಪ್ರಜ್ವಲ್ ನನ್ನು ಸೋಲಿಸುತ್ತೇನೆ. ಪ್ರಜ್ವಲ್ ಸೋಲಿಸಲೇ ಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ. ಪ್ರಜ್ವಲ್ ಸೋಲುತ್ತಾನೆ ಎಂದು ಭವಿಷ್ಯ ನುಡಿದರು.