ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಕ್ಕೆ ಕಾಂಗ್ರೆಸ್ ನಾಯಕರು ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಬಿಜೆಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇದ್ದ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು. ನನ್ನ ಜೀವನದಲ್ಲೇ ಅಂತಹ ಸರ್ಕಾರ ನೋಡಿರಲಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ ಅತಿಹೆಚ್ಚು ಭ್ರಷ್ಟಾಚಾರ ನಡೆದಿತ್ತು. 3 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದರು. ಬಿಜೆಪಿಯವರು ಸಾಲದ ಗ್ಯಾರಂಟಿಯನ್ನು ಕೊಟ್ಟಿದ್ದರು ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.