ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಆಗಮಿಸಿ ಇಲ್ಲಿಂದ ಹೆಲಿಕಾಫ್ಟರ್ ಮೂಲಕ ತೆರಳಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ಡ್ರೋನ್ ಕ್ಯಾಮೆರಾಗಳ ಹಾರಾಟ ನಿಷೇಧಿಸಲಾಗಿದೆ. ಏರ್ಪೋರ್ಟ್ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಡ್ರೋಣ್ ಕ್ಯಾಮರಾ ಬಳಕೆಯನ್ನು ಜಿಲ್ಲಾಡಳಿತವು ನಿಷೇಧಿಸಿದೆ .ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯಾರು ಕೂಡ ಡ್ರೋಣ್ ಹಾರಿಸುವಂತಿಲ್ಲ.