ಮಂಡ್ಯ : ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜಿದ್ದಾಜಿದ್ದಿಯ ಕಣವಾಗಿ ಮಾರ್ಪಟ್ಟು ಇಡೀ ರಾಜ್ಯದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡುವ ಎಲ್ಲ ಸಾಧ್ಯತೆಗಳಿವೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್ಡಿ ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಇಂದು ಸಂಜೆಯೇ ಜೆಡಿಎಸ್ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆಯೂ ಇದೆ. ಚನ್ನಪಟ್ಟಣದ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಮಂಡ್ಯದಿಂದ ಕಣಕ್ಕಿಳಿಯಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದಿರುವ ಅವರು, ಸಂಜೆ ಅಧಿಕೃತ ಘೋಷಣೆ ಮಾಡಲಿದ್ದಾರೆ.