ಬೆಂಗಳೂರು : ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, ಹಾಸನ ಮತ್ತು ಕೋಲಾರ ಮೂರು ಕ್ಷೇತ್ರಗಳ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಮುಂದೆ ಬೀಡಿಕೆ ಇಟ್ಟಿದೆ. ಕ್ಷೇತ್ರ ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದ್ದರು. ಸಭೆಯಲ್ಲಿ ಏನು ನಿರ್ಧಾರ ಕೈಗೊಳ್ಳಲಾಗಿದೆ ಎಂಬುವುದರ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.
ಪ್ರಾರಂಭದಿಂದಲೂ ನಾವು ಮೂರು ಕ್ಷೇತ್ರ ಕೇಳಿದ್ದೇವೆ. ನಾವು ಕೇಳಿದ್ದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವಿಸಿದ್ದಾರೆ. ಸಭೆಯಲ್ಲಿ 28 ಕ್ಷೇತ್ರದಲ್ಲೂ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕು ಅಂತ ಚರ್ಚೆಯಾಗಿದೆ. ಬಿಜೆಪಿ ಹೈಕಮಾಂಡ್ ನಾಯಕರು ಈ ಕ್ಷಣದವರೆಗೂ ಕ್ಷೇತ್ರ ಹಂಚಿಕೆಯನ್ನು ಅಂತಿಮಗೊಳಿಸಿಲ್ಲ. ಬಿಜೆಪಿ ಹೈಕಮಾಂಡರ್ ನಾಯಕರು ನಮ್ಮನ್ನು ತುಂಬಾ ಗೌರವಯುತವಾಗಿ ನೋಡಿಕೊಂಡಿದ್ದಾರೆ. ಜೆಡಿಎಸ್-ಬಿಜೆಪಿ ನಾಯಕರ ನಡುವೆ ಯಾವುದೇ ವಿಶ್ವಾಸ ಕಡಿಮೆಯಾಗಿಲ್ಲ. ನಮ್ಮ ಶಕ್ತಿ ಬಗ್ಗೆ ಮಾತನಾಡಿದ್ದೆನೆ ಎಂದು ಹೇಳಿದರು.