ಮಂಡ್ಯ ಸಂಸದೆ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ.