ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ತುಂಗಭದ್ರಾ ನದಿಯ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ರಾಯಚೂರಿನ ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ರಾಯರ ಮಠದಲ್ಲಿ 33 ದಿನದಲ್ಲಿ 3 ಕೋಟಿ 83 ಲಕ್ಷದ 70 ಸಾವಿರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ಈ ಬಾರಿ ಹೆಚ್ಚಿನ ಪ್ರಮಾಣದ ಕಾಣೆಕೆ ಸಂಗ್ರಹವಾಗಿದೆ. ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು.